ಮಂಗಳೂರು, ಜು 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ದಿನರಾತ್ರಿ ದುಡಿಯುತ್ತಿರುವ ಆರೋಗ್ಯಾಧಿಕಾರಿಗಳಲ್ಲೂ ಇದೀಗ ಸೋಂಕು ಪತ್ತೆಯಾಗಿದೆ.
ಆರೋಗ್ಯಾಧಿಕಾರಿಗಳು ಕೊರೊನಾ ವಿರುದ್ಧ ನಿರಂತರ ಹೋರಾಟ ಮಾಡಿದ್ದಾರೆ. ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ತಮ್ಮಿಂದಾದ ಕೆಲಸ ಕಾರ್ಯಗಳನ್ನು ನಡೆಸಿದ್ದಾರೆ. ದಿನರಾತ್ರಿ ಎನ್ನದೆ, ಸೋಂಕು ನಿಯಂತ್ರಿಸುವ ಕಾರ್ಯವನ್ನು ಮಾಡಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಅಧಿಕಾರಿಗಳು ನಿರಂತರ ಮಾಡಿಕೊಂಡು ಬರುತ್ತಿದ್ದಾರೆ. ಈ ನಡುವೆ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ.
ಇನ್ನು ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವಿ ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಿಸಲು ಸಕಲ ಕ್ರಮಗಳನ್ನು ಕೈಗೊಂಡರೂ ಕೂಡ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸ್ ಅಧಿಕಾರಿಗಳಲ್ಲೇ ಅಧಿಕವಾಗಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಿರಂತರ ಹೋರಾಟಗಳು ಮುಂದುವರೆದಿದೆ. ಜನರು ಭಯಭೀತರಾಗದೆ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಇರಬೇಕಾಗಿದೆ.