ಬೆಂಗಳೂರು ,ಏ08: ವಿಧಾನಸಭಾ ಚುನಾವಣೆ ಪ್ರಚಾರದ ಭಾಗವಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಉದ್ಯಮಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆಗೆ ಉದ್ಯಮಿಯೊಬ್ಬರು ‘ಸರ್’ ಎಂದು ರಾಹುಲ್ ಗಾಂಧಿ ಅವರ ಗಮನ ಸೆಳೆದಾಗ ರಾಹುಲ್ ನನ್ನನ್ನು ಸರ್ ಎಂದು ಕರೆಯಬೇಡಿ.ಎಂದು ಮನವಿ ಮಾಡಿದರು . ಸರ್ ಅನ್ನುವುದಕ್ಕಿಂತ ರಾಹುಲ್ ಎಂದಷ್ಟೇ ಕರೆಯಿರಿ ಎಂದು ಉದ್ಯಮಿಗಳಿಗೆ ಮನವಿ ಮಾಡಿದರು. ಜತೆಗೆ ಸಂವಾದ ಆರಂಭಕ್ಕೂ ಮುನ್ನ ಕೇಂದ್ರದ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ. ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಈ ಸಂದರ್ಭ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಜಿಎಸ್ಟಿ `ಒಂದು ಗಬ್ಬರ್ ಸಿಂಗ್ ತೆರಿಗೆ’ ಎಂದು ಪುನರುಚ್ಚರಿಸಿದರು.
ಈ ಸಂವಾದ ಕಾರ್ಯಕ್ರಮಕ್ಕೂ ಮೊದಲು ನಗರದ ಜಕ್ಕರಾಯನಕೆರೆ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಪೌರಕಾರ್ಮಿಕರೊಂದಿಗೆ ಸಂವಾದ ನಡೆಸಿದರು.