ಮಂಗಳೂರು, ಜು. 03 (DaijiworldNews/MB) : ಯುಪಿಯಲ್ಲಿ ಪ್ರಿಯಾಂಕ ಗಾಂಧಿ ಅವರಿಗೆ ಹವಾ ಇದ್ದು ಈ ಕಾರಣದಿಂದ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಶಾಸಕ, ಮಾಜಿ ಸಚಿವ ಯು ಟಿ ಖಾದರ್ ಅವರು ದೂರಿದ್ದಾರೆ.
ನಗರದಲ್ಲಿ ಪ್ರಿಯಾಂಕ ಗಾಂಧಿಗೆ ನೀಡಲಾಗಿದ್ದ ಸರ್ಕಾರದ ಬಂಗಲೆ ವಾಪಾಸ್ ಹಿನ್ನಲೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿಯವರ ತಂದೆ, ಅಜ್ಜಿಯನ್ನು ಭಯೋತ್ಪಾದಕರು ಕೊಂದಿದ್ದಾರೆ. ಈ ಕಾರಣದಿಂದಾಗಿ ಅವರಿಗೂ ರಕ್ಷಣೆ ನೀಡಲಾಗಿದೆ ಎಂದು ತಿಳಿಸಿದರು.
ದೆಹಲಿಯಲ್ಲಿ ಹಲವು ಜನರು ಸರ್ಕಾರಿ ಬಂಗಲೆಯಲ್ಲಿ ಇದ್ದು ಸರ್ಕಾರ ಮೊದಲು ಅವರ ಹೆಸರನ್ನು ಸರ್ಕಾರ ಬಹಿರಂಗ ಪಡಿಸಲಿ. ಸರ್ಕಾರದ ದ್ವೇಷದ ರಾಜಕಾರಣವನ್ನು ಜನರು ಎಂದಿಗೂ ಸಹಿಸುವುದಿಲ್ಲ ಎಂದು ಖಾದರ್ ಕಿಡಿಕಾರಿದ್ದಾರೆ.