ಉಡುಪಿ, ಜು 03 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ ಈ ದಿನ ಜಿಲ್ಲೆಯಲ್ಲಿ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಈ ನಡುವೆ ಜಿಲ್ಲೆಯಲ್ಲಿ ಶುಕ್ರವಾರದಂದು 273 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನು ಕೂಡ 1417 ಮಂದಿಯ ವರದಿ ಬರಲು ಬಾಕಿ ಇದೆ. ಇಲ್ಲಿಯ ತನಕ ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 1258ಕ್ಕೆ ಏರಿಕೆಯಾದಂತಾಗಿದೆ.
14 ಮಂದಿ ಬಿಡುಗಡೆಯಾಗುವ ಮೂಲಕ 1104 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ. 151 ಮಂದಿ ಮಾತ್ರವೇ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.