ಮಂಗಳೂರು, ಜು 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಇದೀಗ ಮೃತಪಟ್ತಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಮಡಿಕೇರಿ ಮೂಲದವರಾಗಿದ್ದಾರೆ. ಜುಲೈ ಎರಡರಂದು ಗಂಭೀರ ಸ್ಥಿತಿಯಲ್ಲಿ ವೆನ್ ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಅಧಿಕ ರಕ್ತದೊತ್ತಡ, ಮಧುಮೇಹ, ಮೇದೋಜೀರಕದ ಉರಿಯೂತ, ಮೂತ್ರ ಪಿಂಡದ ವೈಫಲ್ಯ ಮತ್ತು ಅಲ್ಕೋಹಾಲಿಕ್ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಲಭಿಸಿದೆ.
ಇನ್ನು ಸದ್ಯ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ವಿವಿಧ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲಾಡಳಿತ ಆರೋಗ್ಯ ಇಲಾಖೆ ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ ಸೋಂಕಿನಿಂದ ಮೃತರಾಗುತ್ತಿರುವ ವರದಿಗಳು ಕೂಡ ಲಭ್ಯವಾಗುತ್ತಿದೆ.