ಮಂಗಳೂರು, ಜು 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ 97 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದೆ.
ಶುಕ್ರವಾರದಂದು 425 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಪರೀಕ್ಷಾ ವರದಿ ಲಭ್ಯವಾಗಿರುವ ಕಾರಣದಿಂದಾಗಿ 97 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಉಳಿದಂತೆ 328 ಮಂದಿಯ ವರದಿ ನೆಗೆಟಿವ್ ಆಗಿದೆ.
ದ.ಕ. ಜಿಲ್ಲೆಯಲ್ಲಿ ಒಟ್ಟು 1010 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 498 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 503 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಐದು ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಈ ಹಿಂದೆ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರನ್ನು ಸ್ಥಳಾಂತರ ಮಾಡಲಾಗಿದೆ. ಶುಕ್ರವಾರದಂದು ಜಿಲ್ಲೆಯಲ್ಲಿ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಇಂದು ಸೋಂಕು ಪತ್ತೆಯಾದವರ ಪೈಕಿ ಮೂವರು ಸೌದಿ, ದುಬೈನಿಂದ ಮರಳಿದವರಾಗಿದ್ದಾರೆ. 28 ಐಎಲ್ ಐ ಪ್ರಕರಣಗಳಾಗಿದೆ. 13 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. 28 ಮಂದಿಯ ಕಮ್ಯುನಿಟಿ ರ್ಯಾಂಡಂ ಸ್ಯಾಂಪಲ್ ಪತ್ತೆಹಚ್ಚಲಾಗುತ್ತಿದೆ. ಉಳಿದಂತೆ 25 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ.