ಮಂಗಳೂರು, ಜು 04 (DaijiworldNews/PY): ದ.ಕ ಜಿಲ್ಲೆಯ ಕೊರೊನಾ ಆಸ್ಪತ್ರೆಯ ವೈದ್ಯರುಗಳಿಗೂ ಕೊರೊನಾ ಸೋಂಕು ಹಿನ್ನೆಲೆ, ಸಿಬ್ಬಂದಿಯ ಕೊರತೆಯ ಕಾರಣ ಖಾಸಗಿ ಆಯುರ್ವೇದ ಆಸ್ಪತ್ರೆಗಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಹೆಚ್ಚಾಗುತ್ತಿದ್ದು, ಕೊರೊನಾ ಆಸ್ಪತ್ರೆಯ ಸಿಬ್ಬಂದಿಗಳು ಸೋಂಕು ಕಾಣಿಸಿಕೊಂಡಿದೆ. ಈ ಕಾರಣದಿಂದ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಹೀಗಾಗಿ ಖಾಸಗಿ ಸಂಸ್ಥೆಗಳ ತಲಾ 5 ಮಂದಿಯನ್ನು ನಿಯೋಜನೆ ಮಾಡಲು ಸೂಚನೆ ನೀಡಲಾಗಿದೆ.
ಈ ನಿಟ್ಟಿನಲ್ಲಿ ದ.ಕ ಜಿಲ್ಲಾ ಆಯುಷ್ ಇಲಾಖೆಯಿಂದ ತಕ್ಷಣ ವೈದ್ಯರ ಮಾಹಿತಿ ನೀಡಲು ಆದೇಶ ನೀಡಿದ್ದು, ಜಿಲ್ಲೆಯ 13 ಆಯುರ್ವೇದ ಆಸ್ಪತ್ರೆಗಳಿಂದ ಸಿಬ್ಬಂದಿಗಳನ್ನು ನಿಯೋಜನೆ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಕೊರೊನಾ ಆಸ್ಪತ್ರೆಯ ಮುಖ್ಯ ವೈದ್ಯರು ಸೇರಿದಂತೆ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ 44 ವೈದ್ಯರಿಗೆ ಕೊರೊನ ಪಾಸಿಟಿವ್ ಪತ್ತೆಯಾಗಿತ್ತು.