ಮಂಗಳೂರು, ಜು 04 (DaijiworldNews/PY): ಜುಲೈ 5ರಂದು ಸಂಪೂರ್ಣ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆ ಉಡುಪಿ-ಮಂಗಳೂರು ಕೆ.ಎಸ್.ಆರ್.ಟಿ.ಸಿ ಸೇರಿ ಖಾಸಗಿ ಬಸ್ ಸಂಚಾರ ಬಂದ್ ಮಾಡಲು ಬಸ್ ಮಾಲೀಕರು ನಿರ್ಧರಿಸಿದ್ದಾರೆ.
ಭಾನುವಾರ ಬೆಳಗ್ಗೆಯಿಂದ ಸೋಮವಾರ ಸಂಚಾರ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ಕರ್ನಾಟಕ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ.
ಈ ಹಿಂದೆ ಭಾನುವಾರ ಲಾಕ್ಡೌನ್ ಘೋಷಣೆ ಮಾಡಿದ್ದ ಸಂದರ್ಭ ಕೆಎಸ್ ಆರ್ಟಿಸಿ ಬಸ್ಗಳು ಸಂಚಾರ ಮಾಡಿವೆ. ಆದರೆ, ಜುಲೈ 5ರ ಭಾನುವಾರ ಸಂಪೂರ್ಣ ಲಾಕ್ಡೌನ್ ಇರುವುದರಿಂದ ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗೆವರೆಗೆ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಕೆಎಸ್ ಆರ್ಟಿಸಿಯಿಂದ ಅಧಿಕೃತ ಪ್ರಕಟಣೆಯಾಗಿದೆ.
ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಶನಿವಾರ ದ.ಕದಲ್ಲಿ ಒಂದೇ ದಿನ 97 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದೆ.