ಹಳೆಯಂಗಡಿ, ಜು. 04 (DaijiworldNews/MB) : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇ ಇದ್ದು ಜಿಲ್ಲೆಯ ಹಳೆಯಂಗಡಿಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ವ್ಯಾಪಾರಿಗಳಲ್ಲಿ ಮನವಿ ಮಾಡಲಾಗುತ್ತಿದೆ.
ಹಳೆಯಂಗಡಿಯಲ್ಲಿ ಇತ್ತೀಚೆಗೆ ಕೊರೊನಾ ದೃಢಪಟ್ಟ ಇಬ್ಬರು ಸೋಂಕಿತರು ಹಳೆಯಂಗಡಿಯಲ್ಲಿರುವ ಪೇಟೆಗೆ ತೆರಳಿದ್ದರು ಎಂದು ಹೇಳಲಾಗಿದ್ದು ಈ ಕಾರಣದಿಂದ ಜುಲೈ 5 ರಿಂದ ಪೇಟೆಯನ್ನು ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ.
ಹಾಗೆಯೇ ಬೆಳಿಗ್ಗೆ 7 ಗಂಟೆಯಿಂದ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು ಮಧ್ಯಾಹ್ನ 1 ಗಂಟೆಗೆ ತಮ್ಮ ಅಂಗಡಿಗಳನ್ನು ಬಂದ್ ಮಾಡುವಂತೆ ವ್ಯಾಪಾರಿಗಳಲ್ಲಿ ಮನವಿ ಮಾಡಲಾಗಿದೆ.
ಇನ್ನು ಮೂಲ್ಕಿಯ ಕೆ ಎಸ್ ರಾವ್ ನಗರದ ಅಂಗಡಿ ಮಾಲಿಕರೊಬ್ಬರು ಪತ್ನಿಗೆ ಕೊರೊನಾ ಪಾಸಿಟಿವ್ ಆದ ಹಿನ್ನಲೆ ಮೂಲ್ಕಿ ಕೆ ಎಸ್ ರಾವ್ ನಗರ ಸೀಲ್ ಡೌನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.