ಬೆಳ್ತಂಗಡಿ, ಜು 04 (Daijiworld News/MSP): ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾ.ಪಂ. ನಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಎಸಿಬಿ ಇನ್ಸ್ಪೆಕ್ಟರ್ ಯೋಗಿಶ್ ಕುಮಾರ್ ಬಿ.ಸಿ. ಅವರ ತಂಡ ಜು.1 ರ ಶನಿವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ.
ಗ್ರಾಮ ಲೆಕ್ಕಿಗ ಹಾಗೂ ಗ್ರಾ.ಪಂ. ಅಧ್ಯಕ್ಷ ಈ ಮೂವರು ಸೇರಿ ಒಂದೇ ಕುಟುಂಬಕ್ಕೆ ಎರಡು, ಮೂರು 94C ಹಕ್ಕು ಪತ್ರ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಅಲ್ಲದೆ ಮತ್ತೊಂದೆಡೆ ಸ್ಥಳದಲ್ಲಿ ಮನೆ ನಿರ್ಮಾಣ ವಾಗದಿದ್ದರೂ ಹಕ್ಕು ಪತ್ರ ನೀಡಲಾಗಿದೆ ಎಂದು ದೂರಲಾಗಿತ್ತು. ಈ ಕುರಿತು ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹದ ದಳದ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ .
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್, ಶ್ಯಾಮ್ ಸುಂದರ್ , ಹರಿ ಪ್ರಸಾದ್, ಪ್ರಶಾಂತ್ ಭಾಗಿಯಾಗಿದ್ದರು.