ಮಂಗಳೂರು,ಜು 04 (Daijiworld News/MSP): ಕರಾವಳಿಯಾದ್ಯಂತ ವರುಣ ಅಬ್ಬರಿಸುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ , ಪುತ್ತೂರು, ಮಂಗಳೂರು, ಸುಬ್ರಹ್ಮಣ್ಯ ಸೇರಿದಂತೆ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ. ಇನ್ನು ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ನದಿಯಾದ ನೇತ್ರಾವತಿ ಹಾಗೂ ಕುಮಾರಧಾರ ತುಂಬಿ ಹರಿಯುತ್ತಿದೆ.
ಘಟ್ಟ ಪ್ರದೇಶದಲ್ಲಿ ಮಳೆಯಾದ ಹಿನ್ನಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳ ಹರಿವು ಹೆಚ್ಚಿದ ಕಾರಣ ತುಂಬೆ ಡ್ಯಾಂ ನ ಗೇಟ್ ನೀರನ್ನು ಹೊರಬಿಡಲಾಗುತ್ತಿದೆ. ಬಂಟ್ವಾಳದ ಶಂಭೂರು ಅಣೆಕಟ್ಟಿನಲ್ಲೂ ವಿದ್ಯುತ್ ಉತ್ಪಾದನೆ ನಡೆಯುತ್ತಿದ್ದು ನೀರು ಹೊರಹರಿಯುತ್ತಿದೆ.
ಇನ್ನು ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಮುಳುಗಡೆಯಾಗುವ ಭೀತಿಯೂ ಎದುರಾಗಿದೆ.