ಮಂಗಳೂರು, ಜು. 05 (DaijiworldNews/MB) : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಏತನ್ಮಧ್ಯೆ ಕೊರೊನಾ ರೋಗ ಲಕ್ಷಣ ಇಲ್ಲದವರಿಗೆ ಮನೆಯಲ್ಲಿಯೇ ಆರೈಕೆ ಮಾಡಲು ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಸೂಚನೆ ನೀಡಿರುವ ಜಿಲ್ಲಾ ಆರೋಗ್ಯಧಿಕಾರಿ, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತವಾದ ರೋಗಿಗಳನ್ನು ತಮ್ಮ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ಆರೈಕೆಗೆ ವ್ಯವಸ್ಥೆ ಮಾಡಲು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.
ಹಾಗೆಯೇ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹಾಗೂ ನಿರ್ಬಂಧನೆಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು ಈ ಹಿಂದೆ ಈ ಬಗ್ಗೆ ದಾಯ್ಜಿವಲ್ಡ್ಗೆ ಮಾಹಿತಿ ನೀಡಿದ್ದ ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ತಾಜುದ್ದೀನ್ನವರು ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಲಕ್ಷಣಗಳಿಲ್ಲದೆ ಪಾಸಿಟಿವ್ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ವ್ಯವ್ಯಸ್ಥೆ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದರು.