ಬಂಟ್ವಾಳ, ಜು 05 (DaijiworldNews/PY): ಅಮ್ಮುಂಜೆ ಗ್ರಾಮದಲ್ಲಿ ನೆರವೇರಿದ ಮದುವೆ ಸಮಾರಂಭದ ವೇಳೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಯುವಕರು ಧ್ವನಿ ವರ್ಧಕಗಳನ್ನು ಬಳಸಿ ಗುಂಪು ಸೇರಿ ನೃತ್ಯ ಮಾಡುತ್ತಿರುವುದು ಎನ್ನಲಾದ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗಿದೆ.





ಜುಲೈ 2ರಂದು ನೆರವೇರಿದ ವಿವಾಹ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಯುವಕರು ಧ್ವನಿ ವರ್ಧಕಗಳನ್ನು ಬಳಸಿ ಗುಂಪು ಸೇರಿ ನೃತ್ಯ ಮಾಡುತ್ತಿರುವುದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ತನಿಖೆಯನ್ನು ನಡೆಸುತ್ತಿದ್ದಾರೆ.
ವಿವಾಹಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ನಿಯಮದಂತೆ 50 ಜನರು ಸೇರಿ ಮದುವೆ ಸಮಾರಂಭವನ್ನು ನಡೆಸಲು ಸ್ಥಳೀಯ ಪಂಚಾಯತ್ನಿಂದ ಅನುಮತಿಯನ್ನು ಪಡೆದಿರುತ್ತಾರೆ. ಯುವಕರ ನೃತ್ಯದ ವಿಡಿಯೋ ಲಾಕ್ಡೌನ್ನ ಸಮಯದಲ್ಲಿ ನಡೆದಿರುವುದೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಲಾಕ್ಡೌನ್ ಸಮಯದಲ್ಲಿ ನಡೆದಿರುವುದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.