ಉಡುಪಿ, ಜು. 05 (DaijiworldNews/SM): ಜಿಲ್ಲೆಯಲ್ಲಿ ಮತ್ತೆ 45 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ನಡುವೆ 22 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಆ ಮೂಲಕ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1322ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 1136 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 183 ಸಕ್ರಿಯ ಪ್ರಕರಣಗಳಿವೆ. ರವಿವಾರದಂದು ಜಿಲ್ಲೆಯಲ್ಲಿ 518 ಮಂದಿಯ ವರದಿ ನೆಗೆಟಿವ್ ಬಂದಿದೆ.