ಮಂಗಳೂರು, ಜು 06 (Daijiworld News/MSP):ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ತೀವ್ರ ಗತಿಯ ಏರಿಕೆಯ ನಡುವೆ ಜು.06ರ ಸೋಮವಾರ ಮತ್ತೊಂದು ಬಲಿಯಾಗಿದೆ. ಮಂಗಳೂರಿನ ತೊಕ್ಕೊಟ್ಟು ಬಳಿ ಸಂತೋಷ್ ನಗರದ ನಿವಾಸಿಯಾಗಿದ್ದ 52 ವರ್ಷದ ವ್ಯಕ್ತಿಯನ್ನು ಮಹಾಮಾರಿ ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಇವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗಾ ಕೊವೀಡ್-19 ಇವರನ್ನು ಬಲಿ ಪಡೆದಿದೆ. ಈ ನಡುವೆ ಕೊವೀಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ಮಂದಿ ತೀವ್ರ ನಿಗಾ ಘಟಕಕ್ಕೆ ದಾಖಲು ಮಾಡಲಾಗಿದೆ.