ಮಂಗಳೂರು ಸೆ20: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪಶ್ಚಿಮ ವಲಯ ಮಟ್ಟದ ಹಿರಿಯ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ,ಪುತ್ತೂರಿನಲ್ಲಿ ಪೊಲೀಸ್ ಅಧಿಕಾರಿಯನ್ನು ನಿಂದಿಸಿದ ಜಗದೀಶ್ ಕಾರಂತ ವಿರುದ್ದ ಎಫ್ ಐ ಆರ್ ದಾಖಲಿಸುವಂತೆ ಸೂಚಿಸಿದ್ದೇನೆ ಎಂದರು.
ವಿದೇಶಿ ಪ್ರಜೆಗಳಿಗೆ , ಹೊರರಾಜ್ಯಗಳ ವಿದ್ಯಾರ್ಥಿಗಳಿಗೆ , ಐಟಿಬಿಟಿ ರಾತ್ರಿಪಾಳಿಯಲ್ಲಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಸೂಕ್ತ ರಕ್ಷಣಾ ವ್ಯವಸ್ಥೆ, ಸಮಾಜದ ಶಾಂತಿ ಕದಡುವ ಶಕ್ತಿಗಳ ವಿರುದ್ದ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಪೋಲಿಸ್ ಇಲಾಖೆ ಸೂಚನೆ ನೀಡಿದ್ದಾರೆ. ವರದಕ್ಷಿಣೆ ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳನ್ನು ತಡೆಹಿಡಿಯಲು, ವೇಶ್ಯಾವಾಟಿಕೆ ಮತ್ತು ಕಾನೂನು ಬಾಹಿರ ಸ್ಕೀಲ್ ಗೇಮ್ ಕೇಂದ್ರದ ಮೇಲೆ ತಕ್ಷಣ ಕ್ರಮ ಹಾಗೂ ರಾತ್ರಿ ಪಾಳಿ ಪೊಲೀಸ್ ಗಸ್ತು ಹೆಚ್ಚಸುವಂತೆ ಸಲಹೆ ನೀಡಿದರು.
ಸಂಸದ ನಳಿನ್ ಕುಮಾರ್ ಪೊಲೀಸ್ ಅಧಿಕಾರಿಗೆ ಅವಾಜ್ ಹಾಕಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಮಾದ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಶೀಘ್ರವೇ ಜಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದರು. ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಎಸ್ ಐ ಟಿ ಮೇಲೆ ಸಂಪೂರ್ಣ ಭರವಸೆಯಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದರು.