ಮಂಗಳೂರು, (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರ ಮತ್ತೆ 34 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ ಈ ದಿನದಂದು 30 ಮಂದಿಯಲ್ಲಿ ಕೊರೊನಾ ಸೋಂಕು ಬಿಡುಗಡೆಗೊಂಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಒಟ್ಟು 1276 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಪೈಕಿ 584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯ ತನಕ 25 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಉದುಪಿ ಜಿಲ್ಲೆಯಲ್ಲಿ ಮತ್ತೆ 40 ಮಂದಿಯಲ್ಲಿ ಪಾಸಿಟಿವ್:
ಇನ್ನು ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯ ಕೊರೋನಾ ಪೀಡಿತರ ಸಂಖ್ಯೆ 1362ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಇಂದಿನ ಪ್ರಕರಣಗಳಲ್ಲಿ 12 ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮಹಾರಾಷ್ಟ್ರದಿಂದ ಬಂದ 6 ಮಂದಿಯಲ್ಲಿ ಇಂದು ಸೊಂಕು ಪತ್ತೆಯಾಗಿದೆ. 1 ಐಎಲ್ ಐ ಪ್ರಕರಣ, ರೋಗಿಗಳ ಸಂಪರ್ಕದಿಂದ 18 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಬೆಂಗಳೂರಿನಿಂದ ಆಗಮಿಸಿದ್ದ ಇಬ್ಬರಲ್ಲಿ ಸೊಂಕು ಪತ್ತೆಯಾಗಿದೆ. ತೆಲಂಗಾಣ ದಿಂದ ಬಂದ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ.