ಕುಂದಾಪುರ, ಜು 07 (Daijiworld News/MSP): ಅಗ್ನಿ ಆಕಸ್ಮಿಕ ಸಂಭವಿಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸೋಮವಾರ ರಾತ್ರಿ ಗಂಗೊಳ್ಳಿ ಗ್ರಾಮದ ವಾಟರ್ ಟ್ಯಾಂಕ್ ಬಳಿ ನಡೆದಿದೆ.


ಜಿ ದಿನೇಶ್ ನಾಯಕ್ ಮತ್ತು ಜಿ ಪದ್ಮನಾಭ್ ನಾಯಕ್ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಎರಡು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿದ್ದು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.
ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಭೀಮಾಶಂಕರ್ ಎಸ್ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಕಾರ್ಬಿ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು.