ಉಡುಪಿ, ಜು 07 (Daijiworld News/MSP): ಕ್ಷುಲಕ ಕಾರಣಕ್ಕೆ ಗುಂಪೊಂದು ಯುವಕನನ್ನು ಹತ್ಯೆ ಮಾಡಿದ ಘಟನೆ ಲಕ್ಷ್ಮೀನಗರ ಪ್ರದೇಶದಲ್ಲಿ ಜುಲೈ 7 ರ ಮಂಗಳವಾರ ನಡೆದಿದೆ.

ಹತ್ಯೆಯಾದ ಯುವಕನನ್ನು ಯೋಗೀಶ್ ಎಂದು ಗುರುತಿಸಲಾಗಿದೆ. ಯೋಗೀಶ್ ಮತ್ತು ತಂಡ ನಡುವೆ ಇದ್ದ ವೈಯಕ್ತಿಕ ಮನಸ್ತಾಪವೇ ಈ ಘಟನೆಗೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.