ಕಾಸರಗೋಡು, ಜು. 07 (DaijiworldNews/MB) : ಮಂಜೇಶ್ವರ ಪರಿಸರದಲ್ಲಿ ಐದಕ್ಕೂ ಅಧಿಕ ಮಂದಿಗೆ ಸಂಪರ್ಕ ಮೂಲಕ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧಗಳನ್ನು ಹೇರಲಾಗಿದೆ.

ಸಾಂದರ್ಭಿಕ ಚಿತ್ರ
ಪಟ್ಟಣಗಳಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು ಬೆಳಿಗ್ಗೆ 11 ರಿಂದ ಸಂಜೆ ಐದು ಗಂಟೆವರೆಗೆ ಮಾತ್ರ ತೆರೆಯಬಹುದಾಗಿದೆ.
ಮಂಜೇಶ್ವರ ಪರಿಸರದಲ್ಲಿ ಸಂಪರ್ಕದಿಂದ ಐದಕ್ಕೂ ಅಧಿಕ ಮಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಇದನ್ನು ಉಲ್ಲಂಘಿಸಿದ್ದಲ್ಲಿ ಕ್ರಮ ತೆಗೆದುಕೊಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.