ಮಂಗಳೂರು, ಜು. 07 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ತನ್ನ ಕರಾಳ ಹಸ್ತವನ್ನು ಚಾಚುತ್ತಲ್ಲೇ ಇದ್ದು ಇಂದು ಮತ್ತೆ 83 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,359 ಮಂದಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಇಂದು ಓರ್ವ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 26 ಮಂದಿ ಸಾವನ್ನಪ್ಪಿದ್ದಾರೆ.
೮೩ ಮಂದಿಯ ಪೈಕಿ 48 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, ಇಬ್ಬರಿಗೆ ದ್ವಿತೀಯ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದ್ದರೆ 20 ಐಎಲ್ಐ ಹಾಗೂ 1 ಎಸ್ಎಆರ್ಐ ಪ್ರಕರಣವಾಗಿದೆ. ಇಬ್ಬರು ಚಿಕ್ಕಮಗಳೂರು ಜಿಲ್ಲೆಗೆ ಹೋಗಿ ಬಂದಿರುವವರಾಗಿದ್ದಾರೆ. 3 ಮಂದಿಗೆ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ.
ಈವರೆಗೆ 21881 ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು 21,395 ದ್ರವದ ಮಾದರಿಯ ವರದಿ ಲಭಿಸಿದೆ. ಈ ಪೈಕಿ 1,359 ಪಾಸಿಟಿವ್ ಆಗಿದ್ದರೆ 20,036 ನೆಗೆಟಿವ್ ಆಗಿದೆ.
ಇಂದು 99 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು ೬೮೩ ಮಂದಿ ಗುಣಮುಖರಾಗಿದ್ದಾರೆ. 650 ಸಕ್ರಿಯ ಕೊರೊನಾ ಪ್ರಕರಣಗಳಾಗಿವೆ. ಹಾಗೆಯೇ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.