ಉಡುಪಿ, ಜು. 07 (DaijiworldNews/MB) : ಜಿಲ್ಲೆಯಲ್ಲಿ ಮಂಗಳವಾರ 28 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1390ಕ್ಕೆ ಏರಿಕೆಯಾಗಿದೆ.

ಮಂಗಳವಾರ 21 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಯಾಗಿದ್ದು ಈವರೆಗೆ 1,023 ಮಂದಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಮೂವರು ಕೊರೊನಾಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 19773 ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಈ ಪೈಕಿ 1390 ವರದಿ ಪಾಸಿಟಿವ್ ಆಗಿದೆ. 15756 ವರದಿಗಳು ನೆಗೆಟವ್ ಬಂದಿದ್ದು ಇನ್ನು 2627 ವರದಿಗಳ ಫಲಿತಾಂಶ ಬರಬೇಕಾಗಿದೆ.
ಉಡುಪಿ ಜಿಲ್ಲಾಡಳಿತ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ ಪ್ರಕಾರ, ಒಟ್ಟು 4,875 ಜನರು 28 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ, ಒಟ್ಟು 4,875 ಜನರು 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 1,170 ಜನರು ಪ್ರಸ್ತುತ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.