ಮಂಗಳೂರು, ಜು 08 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೊನಾದಿಂದ ಮತ್ತೊಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ ಮೃತಪಟ್ಟವರು. ಇವರು ನಗರದ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ
ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದೆ.