ಬೆಳ್ಮಣ್, ಜು 08 (Daijiworld News/MSP): ಕರಾವಳಿಯಲ್ಲಿ ಕೊರೊನಾ ವ್ಯಾಪಕಗೊಳ್ಳುತ್ತಿರುವ ನಡುವೆ ಮಾರಕ ಡೆಂಗ್ಯೂ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿದೆ. ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯ ನರ್ಸ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ಬೆಳ್ಮಣ್ ನಿವಾಸಿ ದಿವ್ಯಾ (23) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ ಜ್ವರ ಉಲ್ಬಣಗೊಂಡಿದ್ದರಿಂದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.