ಉಡುಪಿ, ಜು 08 (Daijiworld News/MSP): ಯೋಗೀಶ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಜು.6 ಭಾನುವಾರ ರಾತ್ರಿ 11.30 ಕ್ಕೆ ತೆಂಕನಿಡಿಯೂರಿನ ಲಕ್ಷ್ಮೀನಗರ ಬಳಿ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಇರಿದು ಯೋಗೀಶ್ ಪೂಜಾರಿ ಹತ್ಯೆ ನಡೆಸಿತ್ತು.

ಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಕೊಲೆ ನಡೆದು ಒಂದೇ ದಿನದಲ್ಲಿ ಪ್ರಕರಣವನ್ನು ಬೇಧಿಸಿದ ಕುಖ್ಯಾತ ರೌಡಿ ಶೀಟರ್ ಸುಜಿತ್ ಪಿಂಟೋ ಸಹಿತ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಜಿತ್ ಪಿಂಟೋ, ಆತನ ಸಹೋದರ ರೋಹಿತ್ ಪಿಂಟೋ, ಅಣ್ಣು ಅಲಿಯಾಸ್ ಪ್ರದೀಪ್, ವಿನಯ್ ಬಂಧಿತ ಆರೋಪಿಗಳು. ಪ್ರಕರಣದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು ಆತನ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತನ ಬಂಧನಕ್ಕೆ ಎರಡು ತಂಡ ರಚಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಯೋಗೀಶ್ ನನ್ನು ಹತ್ಯೆ ಮಾಡಿದ ಸ್ಥಳಕ್ಕೆ ಆರೋಪಿಗಳನ್ನು ಕರೆತಂದು ಮಹಜರು ಮಾಡಲಾಗಿದೆ.