ಬಂಟ್ವಾಳ, ಜು 09 (Daijiworld News/MSP): ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿಲ್ಲಿ ಕರ್ತವ್ಯ ನಿರತ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಜು.09ರ ಗುರುವಾರ ನಡೆದಿದೆ.

ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ತಲೆಗೆ ಹಾಗೂ ಕೈಗೆ ಗಾಯಗಳದ ಹಿನ್ನಲೆಯಲ್ಲಿ ವಾಮದಪದವು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಶಾ ಕಾರ್ಯಕರ್ತೆ ಮಮತ ಗಟ್ಟಿ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ ಸುಮಾರು 10 ಗಂಟೆಗೆ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾರೆಂದು ವಾಮದ ಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.