ಮಂಗಳೂರು, ಜು 09 (Daijiworld News/MSP): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೊನಾದಿಂದ ಮತ್ತೊಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಿನ್ನೆ ಒಂದೇ 183 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಬಾಣಂತಿ ಹಾಗೂ ಭಟ್ಕಳ ಮೂಲದ ವ್ಯಕ್ತಿ ಸಹಿತ ಮೂವರನ್ನು ಬಲಿಪಡೆದಿದ್ದು. ಗುರುವಾರ ಕೂಡಾ 168 ಮಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು , ಈ ಬಗ್ಗೆ ಜಿಲ್ಲಾಡಳಿತ ಇನ್ನಷ್ಟೇ ಸ್ಪಷ್ಟಪಡಿಸಬೇಕಾಗಿದೆ.