ಮಂಗಳೂರು, ಜು.09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು ಮತ್ತೆ 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

42 ಮಂದಿಯಲ್ಲಿ ಐಎಲ್ ಐ ಪ್ರಕರಣ ಪತ್ತೆಯಾಗಿದೆ. 6 ಮಂದಿಯಲ್ಲಿ ಸಾರಿ ಪ್ರಕರಣ ದೃಢಪಟ್ಟಿದೆ. ಬೆಂಗಳೂರಿನಿಂದ ಮರಳಿದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್, ದುಬೈಯಿಂದ ಮರಳಿದ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಪ್ರೀಸರ್ಜರಿ ಸ್ಯಾಂಪಲ್ ಪಾಸಿಟಿವ್ 13 ಮಂದಿಯಲ್ಲಿ ದೃಢಪಟ್ಟಿದೆ. 38 ಸೋಂಕಿತರ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿದೆ. ಇನ್ನು ಈ ನಡುವೆ ಜಿಲ್ಲೆಯಲ್ಲಿ 702 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 977 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.