ಉಡುಪಿ, ಜು 10 (DaijiworldNews/PY): ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು 20 ವರ್ಷದ ಕಠಿಣ ಶಿಕ್ಷೆ ಹಾಗೂ 60,000 ದಂಡ ವಿಧಿಸಿದೆ.

2017ರ ಜೂನ್ 29ರಂದು ಇಬ್ಬರು ಆರೋಪಿಗಳಾದ ಗ್ಲೆನ್ ಮಥಾಯಸ್ ಹಾಗೂ ಸುಹೇಲ್ ಎಂ. ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ . ಮಣಿಪಾಲದ ಲಾಡ್ಜ್ನಲ್ಲಿ ದೌರ್ಜನ್ಯವೆಸಗಿದ್ದರು ಎಂದು ಬಾಲಕಿಯ ತಾಯಿ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅಂದಿನ ಮಣಿಪಾಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುದರ್ಶನ್ ಅವರು ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಾಲಯದ ನ್ಯಾ. ವನಮಾಲಾ ಆನಂದ್ ರಾವ್ ಅವರು ತೀರ್ಪು ನೀಡಿದರು. ಸರ್ಕಾರದ ಪರವಾಗಿ ಜಿಲ್ಲಾ ವಿಶೇಷ ಅಭಿಯೋಜಕ ವೈ.ಟಿ.ರಾಘವೇಂದ್ರ ಅವರು ವಾದಿಸಿದ್ದರು. ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು.