ಮಂಗಳೂರು, ಜು 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಶುಕ್ರವಾರದಂದು 8 ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಮೃತರ ಪೈಕಿ 7 ಮಂದಿ ಪುರುಷರು ಹಾಗೂ ಓರ್ವ ಮಹಿಳೆ ಸೇರಿಕೊಂಡಿದ್ದಾರೆ. 35, 65, 67, 48, 57, 68 ಮತ್ತು 55 ವರ್ಷದ ಪುರುಷರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, 58 ವರ್ಷದ ವೃದ್ದೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಇನ್ನು ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ 139 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ನಡುವೆ 51 ಮಂದಿ ಶುಕ್ರವಾರದಂದು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಗೊಂದಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ 753 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.