ಮಂಗಳೂರು, ಜು 10(DaijiworldNews/SM): ಕೊರೊನಾದಿಂದ ಸಿಐಎಸ್ ಎಫ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳೂರಿನ ಪ್ರಸಿದ್ದ ಸಂಸ್ಥೆಯೊಂದರಲ್ಲಿ ಅವರು ಕರ್ತವ್ಯದಲ್ಲಿದ್ದರು.

ಸಿಐಎಸ್ ಎಫ್ ಕ್ಯಾಂಪ್ ನಲ್ಲಿ ಎ ಎಸ್ ಐಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚಿಗೆ ಇಲ್ಲಿನ ಕೆಲವು ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಇವರಲ್ಲಿ ಪಾಸಿಟಿವ್ ಕಂಡುಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಈ ನಡುವೆ ಅವರು, ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದರು ಎಂಡು ತಿಳಿದುಬಂದಿದೆ.
ಆದರೆ, ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಐಎಸ್ ಎಫ್ ಅಧಿಕಾರಿಗಳು ಟ್ವೀಟ್ ಮಾಡಿದ್ದಾರೆ.