ಮಂಗಳೂರು, ಜು 10 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶನಿವಾರದಂದು ಯಾವುದೇ ಲಾಕ್ ಡೌನ್ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿರುವ ಅವರು, ಜಿಲ್ಲೆಯಲ್ಲಿ ರವಿವಾರ ಲಾಕ್ ಡೌನ್ ಇರಲಿದೆ. ಶನಿವಾರದಂದು ಯಾವುದೇ ಲಾಕ್ ಡೌನ್ ಇಲ್ಲ ಎಂದಿದ್ದಾರೆ.

ಇನ್ನು ಶನಿವಾರ ಸಂಜೆ 8 ಗಂಟೆಯಿಂದ ಸೋಮವಾರ ಮುಂಜಾನೆ 5ರ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ರವಿವಾರದಂದು ಈಗಾಗಲೇ ಆದೇಶ ನೀಡಿರುವಂತೆ ದಿನವಿಡಿ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದಿದ್ದಾರೆ.
ಇನ್ನು ಶನಿವಾರ ಲಾಕ್ ಡಾನ್ ಇದೆ ಎಂಬುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶವೊಂದು ಹರಿದಾಡುತ್ತಿತ್ತು. ಇದರಿಂದ ಕೆಲವರು ಗೊಂದಲಕ್ಕೀಡಾಗಿದ್ದರು. ಆದರೆ, ಇದೀಗ ಸ್ಪಷ್ಟನೆ ಸಿಕ್ಕಿದಂತಾಗಿದೆ. ಶನಿವಾರದಂದು ಯಾವುದೇ ಲಾಕ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.