ಮಂಗಳೂರು, ಜು.11 (DaijiworldNews/MB) : ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ.

ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಇನ್ನು ಕೊಲೆಗೆ ವೈಯಕ್ತಿಕ ಹಾಗೂ ರಾಜಕೀಯ ಕಾರಣ ಎಂದು ಹೇಳಲಾಗುತ್ತಿದೆ.
ಈ ಕುರಿತಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.