ಮಂಗಳೂರು, ಜು.11 (DaijiworldNews/MB) : ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.


ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದ್ದು ಸದ್ಯಕ್ಕೆ ಹಳೇ ಪೊಲೀಸ್ ಠಾಣೆ ಕಟ್ಟಡಕ್ಕೆ ಠಾಣೆಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹಾಗೆಯೇ ಸೋಂಕು ದೃಢಪಟ್ಟ ಸಿಬ್ಬಂದಿಯ ಜೊತೆ ಸಂಪರ್ಕದಲ್ಲಿದ್ದ ಹಲವು ಪೊಲೀಸರಿಗೆ ಕ್ವಾರೆಂಟೈನ್ ಒಳಪಡುವಂತೆ ಸೂಚಿಸಲಾಗಿದೆ. ಸದ್ಯಕ್ಕೆ ಹಳೇ ಪೊಲೀಸ್ ಠಾಣೆ ಕಟ್ಟಡಕ್ಕೆ ಠಾಣೆಯನ್ನು ಸ್ಥಳಾಂತರ ಮಾಡಲಾಗಿದೆ.