ಮಂಗಳೂರು, ಜು.12 (DaijiworldNews/MB) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿಯಾದ 60 ವರ್ಷದ ವೃದ್ಧ ಭಾನುವಾರ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಿಂದೆ ಕೊರೊನಾ ಲಕ್ಷಣ ಕಾಣಿಸಿಕೊಂಡ ಕಾರಣ ಎರಡು ದಿನಗಳ ಹಿಂದೆ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಬೆಳಿಗ್ಗೆ ಮನೆಯಲ್ಲೇ ವೃದ್ಧ ಸಾವನ್ನಪ್ಪಿದ್ದು ವರದಿಯಲ್ಲೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಬೆಳ್ತಂಗಡಿ ತಹಶೀಲ್ದಾರ್ ನೇತೃತ್ವದಲ್ಲಿ ಸೋಂಕಿತನ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.