ಪುತ್ತೂರು, ಜು 12 (DaijiworldNews/PY): ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಪುತ್ತೂರಿನ ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು ಆಸ್ಪತ್ರೆಯಲ್ಲಿ ನ್ಯೂಮೇನಿಯಾ ಹಿನ್ನೆಲೆ ದಾಖಲಾಗಿದ್ದ ಈ ವ್ಯಕ್ತಿಗೆ ಜು 10 ಕೊರೊನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದ ಭಾನುವಾರ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಮೊದಲು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ತೀರಾ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಬಳಿಕ ಮಂಗಳೂರಿನ ದೇರಳಕಟ್ಟೆ ಆಸ್ಪತ್ರಗೆ ದಾಖಲಿಸಲಾಗಿತ್ತು. ಆ ಸಂದರ್ಭ ಅವರ ಗಂಟಲ ಮಾದರಿ ಪರೀಕ್ಷೆಯ ವೇಳೆ ಅವರಿಗೆ ಕೊರೊನಾ ದೃಢಪಟ್ಟಿದ್ದು, ಭಾನುವಾರ ಅವರು ಸಾವನ್ನಪ್ಪಿದ್ದಾರೆ.
ಮೃತದೇಹವನ್ನು ಪುತ್ತೂರು ಮಾಡ್ನೂರಿಗೆ ತಂದು ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ ತಿಳಿಸಿದ್ದಾರೆ.