ಕಾರ್ಕಳ, ಜು.12 (DaijiworldNews/MB) : ಗ್ರಾಮ ಪಂಚಾಯತಿ ಸದಸ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ದೃಢಪಟ್ಟ ಘಟನೆ ಬೆಳ್ಮಣ್ ನಲ್ಲಿ ನಡೆದಿದೆ.

ಇಲ್ಲಿನ ಬೆಳ್ಮಣ್ ಗ್ರಾಮ ಪಂಚಾಯತಿಯ ಸಿಬ್ಬಂದಿಗಳಿಗೆ ಹಾಗೂ ಸದಸ್ಯರಿಗೆ ಇತ್ತೀಚೆಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು ಇದೀಗ ಜಂತ್ರ ಪುನಾರು ನಿವಾಸಿ ಸದಸ್ಯರೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಈ ಹಿನ್ನಲೆಯಲ್ಲಿ ಅವರನ್ನು ಕಾರ್ಕಳ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಸಿಟಿವ್ ಬಂದ ವ್ಯಕ್ತಿ ಬೆಳ್ಮಣ್ ಪೇಟೆ ಪರಿಸರ ಸುತ್ತಾಡಿದ್ದು ಬೆಳ್ಮಣ್ ಭಾಗದ ಜನರಲ್ಲಿ ಆತಂಕ ಎದುರಾಗಿದೆ.