ಮಂಗಳೂರು, ಜು 12 (DaijiworldNews/PY): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೊರೊನಾದಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಉರ್ವಾಸ್ಟೋರ್ ನ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ, ಬೆಳ್ತಂಗಡಿ ಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ ಹಾಗೂ ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಈ ಪೈಕಿ ನಾಲ್ವರು ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಓರ್ವ ಒಬ್ಬರು ಸ್ವನಿವಾಸದಲ್ಲಿ ಹಾಗೂ ಇನ್ನೊಬ್ಬರು ದೇರಳಕಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.