ಮಂಗಳೂರು, ಜು.12 (DaijiworldNews/SM): ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಇದೀಗ ಗುಣಮುಖರಾಗಿದ್ದಾರೆ. ರವಿವಾರ ಲಭ್ಯವಾದ ವರದಿಯ ಪ್ರಕಾರ ಅವರಲ್ಲಿ ಕೊರೊನಾ ಸೋಂಕು ಇಲ್ಲ ಎಂಬುವುದು ದೃಢಪಟ್ಟಿದೆ.

ಜುಲೈ 2 ರಂದು ಶಾಸಕ ಭರತ್ ಶೆಟ್ಟಿ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬಳಿಕ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹತ್ತು ದಿನಗಳ ಚಿಕಿತ್ಸೆ ಬಳಿಕ ಶಾಸಕ ಭರತ್ ಶೆಟ್ಟಿ ಇದೀಗ ಗುಣಮುಖರಾಗಿದ್ದಾರೆ. ರವಿವಾರದಂದು ಮತ್ತೊಮ್ಮೆ ಪರೀಕ್ಷೆ ನಡೆಸಿದ ಗಂಟಲುದ್ರವ ಪರೀಕ್ಷಾ ವರದಿ ಲಭ್ಯವಾಗಿದ್ದು, ಅದು ನೆಗೆಟಿವ್ ಆಗಿದೆ.

ಆ ಮೂಲಕ ಶಾಸಕ ಭರತ್ ಶೆಟ್ಟಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.