ಉಡುಪಿ, ಜು.13 (DaijiworldNews/MB) : ಉಡುಪಿಯಲ್ಲಿ ಕೊರೊನಾ ಸೋಂಕಿಗೆ ಸೋಮವಾರ ಮತ್ತೊಂದು ಬಲಿಯಾಗಿದೆ.

15 ದಿನಗಳ ಹಿಂದೆ ಬೈಂದೂರಿನ 70 ವರ್ಷದ ವೃದ್ಧರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ವೃದ್ಧ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದು ಈ ಪೈಕಿ ಒಬ್ಬರು ದಾವಣಗೆರೆ ಮೂಲದವರಾಗಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರದವರೆಗೆ 1,608 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ 1,273 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 332 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.