ಕಾಸರಗೋಡು, ಜು.13 (DaijiworldNews/SM): ಕಾಸರಗೋಡು ಜಿಲ್ಲೆಯಲ್ಲಿ ಇಂದು ಮತ್ತೆ 9 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಐದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಏಳು ಮಂದಿ ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಓರ್ವ ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೋರ್ವನಿಗೆ ಸಂಪರ್ಕದಿಂದ ಸೋಂಕು
ತಗುಲಿದೆ.
ಇನ್ನು ನೀಲೇಶ್ವರ ನಗರಸಭಾ ಆರೋಗ್ಯ ಸಿಬ್ಬಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಈ ನಡುವೆ ಏಳು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.