ಮಂಗಳೂರು, ಜು. 13 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದಾಗಿ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

70 ವರ್ಷದ ವ್ಯಕ್ತಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. 53 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು 60 ವರ್ಷದವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಮತ್ತೊಬ್ಬ 70 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಪೈಕಿ 70 ವರ್ಷದ ವ್ಯಕ್ತಿಯೊಬ್ಬರು ಜುಲೈ 12ರಂದು ಮೃತಪಟ್ಟಿದ್ದರು. ಅವರಲ್ಲಿ ಇಂದು ಸೋಂಕು ಇರುವುದು ದೃಢಪಟ್ಟಿದೆ. ಇನ್ನು 70 ವದ ಮತ್ತೊಬ್ಬ ವ್ಯಕ್ತಿ ಜುಲೈ 11ರಂದು ಮೃತಪಟ್ಟಿದ್ದರು. ಅವರಲ್ಲಿ ಇಂದು ಸೋಂಕು ಪತ್ತೆಯಾಗಿದೆ.
ಸದ್ಯ ದ.ಕ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.