ಕಾಸರಗೋಡು, ಜು.14 (DaijiworldNews/MB) : ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಮದ್ಯವನ್ನು ಕುಂಬಳೆ ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.



ಬಂಧಿತನನ್ನು ಮೀಯಪದವು ಕೂಳೂರಿನ ನವೀನ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.
ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಅಂಗಡಿಮೊಗರು ಸೇತುವೆಯಲ್ಲಿ ಇನ್ನೋವಾ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.
ಕಾರಿನಲ್ಲಿ 51 ಬಾಕ್ಸ್ ಗಳಲ್ಲಿ 2668 ಬಾಟಲ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಿಂದ ಅಕ್ರಮ ಮದ್ಯ ತಂದು ದಾಸ್ತಾನಿಟ್ಟು ವಿವಿದೆಡೆಗೆ ಪೂರೈಕೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ