ಉಡುಪಿ, ಜು 15 (DaijiworldNews/PY): ಉಡುಪಿ ನಗರಸಭೆಯ ಇಬ್ಬರು ಸದಸ್ಯೆಯರಿಗೆ ಬುಧವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಯಾವ ಮೂಲದಿಂದ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ. ಇಬ್ಬರಲ್ಲಿ ಓರ್ವ ಸದಸ್ಯೆ ಕಳೆದ ಹಲವು ದಿನಗಳಿಂದ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಸೋಂಕು ಪತ್ತೆಯಾದ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ನಗರಸಭೆಯ ಅಧಿಕಾರಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿತ್ತು. ಅಲ್ಲದೇ, ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿತ್ತು.
ಇನ್ನು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ತುರ್ತು ಕಾರ್ಯಗಳಿಗೆ ಮಾತ್ರವೇ ಮುಂಜಾಗ್ರತಾ ಕ್ಮ ಕೈಗೊಂಡು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಬೇಕು ಎನ್ನುವ ಮನವಿ ಕೇಳಿಬರುತ್ತಿದೆ.