ವಿಟ್ಲ, ಜು 15 (Daijiworld News/MSP): ಕೊರೊನಾ ಸೋಂಕಿಗೆ ವಿಟ್ಲದಲ್ಲಿ ಮೊದಲ ಬಲಿಯಾಗಿದೆ. ವಿಟ್ಲದ ಕಸಬಾ ಗ್ರಾಮದ ನಿವಾಸಿ 73 ವರ್ಷದ ವೃದ್ಧ ವೃದ್ಧರೊಬ್ಬರು ಚಿಕಿತ್ಸೆ ಫಲಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿನೊಂದಿಗೆ ಇವರು ಇತರ ಖಾಯಿಲೆಗಳಿಂದಲೂ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಇವರ ಪುತ್ರನಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಕುಟುಂಬದ ಒಟ್ಟು ಏಳು ಮಂದಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು.
ಇವರಲ್ಲೂ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿತ್ತು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕೊವಿಡ್-೧೯ ಮಾರ್ಗಸೂಚಿಯಂತೆ ತರಬೇತಿ ಪಡೆದ ಪಿ ಎಫ್ ಐ ಕಾರ್ಯಕರ್ತರು ಮಸೀದಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು. ವಿಟ್ಲ ಕಂದಾಯ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡರು