ಉಡುಪಿ, ಜು 15 (DaijiworldNews/PY): ಉಡುಪಿ ಜಿಲ್ಲೆಯಲ್ಲಿ ಮತ್ತೆ 53 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ.

ಅಜ್ಜರಕಾಡು ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರು ಹಾಗೂ ನಾಲ್ವರು ಸಿಬ್ಬಂದಿಗಳಿಗೂ ಕೊರೊನಾ ದೃಢಪಟ್ಟಿದೆ.
ಈ ನಡುವೆ ಬುಧವಾರ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1382 ಮಂದಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 401 ಸಕ್ರಿಯ ಪ್ರಕರಣಗಳಿವೆ.
ಇಂದು 885 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 832 ಜನರ ವರದಿ ನೆಗೆಟಿವ್ ಆಗಿದೆ. ಪ್ರಸ್ತುತ 1766 ಮಂದಿ ಮನೆಗಳಲ್ಲಿ ಮತ್ತು 160 ಜನರು ಆಸ್ಪತ್ರೆಗಳ ಐಸೊಲೇಶನ್ ವಾರ್ಡ್ಗಳಲ್ಲಿ ಕ್ವಾರಂಟೈನ್ನಲ್ಲಿದ್ದಾರೆ.