ಮಂಗಳೂರು, ಜು. 15, (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ ಮತ್ತೆ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ ೨೫೨೫ಕ್ಕೆ ಏರಿಕೆಯಾಗಿದೆ.

ಈ ನಡುವೆ ಜಿಲ್ಲೆಯಲ್ಲಿ 104 ಮಂದಿಯ ಬುಧವಾರದಂದು ಸೋಂಕು ಮುಕ್ತರಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 1089 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1379 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 22740 ಮಂದಿಯ ವರದಿ ನೆಗೆಟಿವ್ ಬಂದಿದೆ.
ಉಡುಪಿ ಜಿಲ್ಲೆಯಲ್ಲಿ ಮತ್ತೆ 53 ಮಂದಿಯಲ್ಲಿ ಸೋಂಕು:
ಇನ್ನು ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತೆ 53 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ. ಈ ಪೈಕಿ 401 ಮಂದಿ ಮಾತ್ರ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಬುಧವಾರದಂದು 22 ಮಂದಿ ಗುಣಮುಖರಾಗಿದ್ದು, 1382 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.