ಮಂಗಳೂರು, ಜು. 15, (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ನಡುವೆಯೇ ಸಾವಿನ ಸಂಖ್ಯೆಯೂ ಕೂಡ ಏರಿಕೆಯಾಗುತ್ತಿದೆ. ಬುಧವಾರದಂದು ಮತ್ತೆ ನಾಲ್ವರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಸುಳ್ಯ ತಾಲೂಕಿನ 60 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು. ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಬಂಟ್ವಾಳ ತಾಲೂಕಿನ 73 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ. ನ್ಯುಮೋನಿಯಾದಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಬಂಟ್ವಾಳ ಮೂಲದ 70 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದು, ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇನ್ನು ಬಂಟ್ವಾಳ ಮೂಲದ 68 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರು ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.