ಮಂಗಳೂರು, ಏ16 : ದೇಶವ್ಯಾಪಿ ಉನ್ನಾವೋ ಮತ್ತು ಕಥುವಾ ರೇಪ್ ಪ್ರಕರಣಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲೂ ಪ್ರಕರಣವನ್ನು ಖಂಡಿಸಿ ದ.ಕ.ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.
ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ್ದ .ಕ.ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು, ಬಾಯಿಗೆ ಕಪ್ಪು ಪಟ್ಟಿ ಧರಿಸಿ, ಪ್ಲೇಕಾರ್ಡ್ ಪ್ರದರ್ಶಿಸಿ ಮೌನ ಪ್ರತಿಭಟನೆ ನಡೆಸಿದರು .ಬಳಿಕ ದ.ಕ ಜಿಲ್ಲಾಧಿಕಾರಿಯ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಕೆ.ಅಶ್ರಫ್, ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್,ಮುಸ್ಲಿಂ ಲೀಗ್ ಯುವ ಜಿಲ್ಲಾಧ್ಯಕ್ಷ ಸಿದ್ದೀಕ್ ತಲಪಾಡಿ ಮುಂತಾದವರು ಉಪಸ್ಥಿತರಿದ್ದರು.