ಮಂಗಳೂರು, ಏ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ. ಪಕ್ಷದ ಗೆಲುವಿಗೆ ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸಲಿದ್ದೇವೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜ ತಿಳಿಸಿದ್ದಾರೆ. ಏ 16 ರ ಸೋಮವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಸಿಟ್ಟಿಂಗ್ ಎಂ ಎಲ್ ಎ ಗಳಿಗೆ ಟಿಕೆಟ್ ನೀಡಬೇಕೆಂಬು ಪಕ್ಷದ ನಿರ್ಧಾರ. ಈ ಹಿನ್ನೆಲೆಯಲ್ಲಿ ಮೂಡಬಿದ್ರೆಯಲ್ಲಿ ಶಾಸಕ ಅಭಯ ಚಂದ್ರ ಜೈನ್ ಗೆ ಟಿಕೆಟ್ ನೀಡಲಾಗಿದೆ. ಈ ಹಿಂದೆ ಜೈನ್ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಸುವುದಿಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ನಾನು ಟಿಕೆಟ್ ಕೇಳಿದ್ದೆ. ಆದ್ರೆ ಪಕ್ಷ ಪ್ರಸ್ತುತ ಹಾಲಿ ಶಾಸಕರಿಗೆ ಟಿಕೆಟ್ ನೀಡಿದ್ದು, ಇದರಿಂದ ಬೇಜಾರು ಇಲ್ಲ ಎಂದರು. ಈ ಹಿಂದೆ ಖುದ್ದು ಮುಖ್ಯಮಂತ್ರಿಯವರೇ, ಅಭಯಚಂದ್ರ ಜೈನ್ ಮತ್ತೆ ಚುನಾವಣೆಗೆ ನಿಲ್ಲುವುದಾದರೆ ಬೇರೆ ಯಾರಿಗೂ ಆ ಸ್ಥಾನ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಹಾಗಿರುವಾಗ ನಾನು ಆ ಕ್ಷೇತ್ರದಲ್ಲಿ ಸೃಷ್ಟಿಸುವ ನೆಟ್ವರ್ಕ್, ಕೆಲಸ ಅದು ಪಕ್ಷದ ಅಭಯರಿಗೆ ಲಾಭವಾಗಲಿದೆ. ಅವರು ಇನ್ನಷ್ಟು ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಪ್ರಚಾರಕ್ಕೆ ಫುಲ್ಟೈಮ್ ಆಗಿ ಕರೆದರೆ ಹೋಗಲು ಸಿದ್ಧ ಎಂದು ಐವನ್ ಡಿಸೋಜಾ ಹೇಳಿದರು, ಇದೇ ಸಂದರ್ಭದಲ್ಲಿ ಶೀಘ್ರವೇ ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆ ಸೇರಿದಂತೆ ಚುನಾವಣೆ ನೀತಿ ಸಂಹಿತೆ ಹೆಸರಿನಲ್ಲಿ ರಾಜ್ಯಾದ್ಯಂತ ಅಧಿಕಾರಿಗಳು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪತಿಕಾಗೋಷ್ಟಿಯಲ್ಲಿ ನಗರ ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ, ಜೆಸಿಂತಾ ಆಲ್ಪ್ರೆಡ್, ಲತಾ ಸಾಲ್ಯಾನ್, ನಝೀರ್ ಬಜಾಲ್, ಶಕುಂತಳಾ ಕಾಮತ್, ಪುನೀತ್ ಶೆಟ್ಟಿ, ನರೇಂದ್ರ ಕುಮಾರ್, ಭಾಸ್ಕರ ರಾವ್, ಎಂ.ಪಿ. ಮನುರಾಜ್, ಮುಂತಾದವರು ಉಪಸ್ಥಿತರಿದ್ದರು.